ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಗಿಣಿ ದ್ವಿವೇದಿ ಅವರಿಗೆ ಜಾಮೀನು ನೀಡಿದ್ದು, ಈ ಮೂಲಕ ನಟಿ ರಾಗಿಣಿ ದ್ವಿವೇದಿ ಅವರ 140 ದಿನಗಳ ಜೈಲು ವಾಸ ಅಂತ್ಯವಾಗಿದೆ.
ನಟಿ ರಾಗಿಣಿ ದ್ವಿವೇದಿ ಅವರು ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 140 ದಿನಗಳಿಂದ ಜೈಲಿನಲ್ಲಿದ್ದರು. ಇಂದು ನಟಿ ರಾಗಿಣಿ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.