ಬೆಂಗಳೂರು: ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಬೆಂಗಳೂರಿನ ನಗರದ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಹೌದು ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಧರಣಿ ಸ್ಥಳದಲ್ಲಿ ನಾನೂ ಇದ್ದೆ. ಅಲ್ಲಿ ಶಾಸಕರನ್ನು ಪೊಲೀಸರು ಎಳೆದಾಡಿದರು. ಆಗ ಶಾಸಕಿ ಸೌಮ್ಯಾ ರೆಡ್ಡಿ ಅವರು ಸ್ವಯಂ ರಕ್ಷಣೆಗೆ ಯತ್ನಿಸಿದರು. ಶಾಸಕಿ ಪರವಾಗಿ ನಾವು ನಿಲ್ಲುತ್ತೇವೆ. ಪೊಲೀಸರ ಕೃತ್ಯಕ್ಕೆ ಸರ್ಕಾರದ ಬೆಂಬಲವಿದೆ. ಇವರು ಮಹಿಳೆಯರನ್ನಷ್ಟೇ ಟಾರ್ಗೆಟ್ ಮಾಡುತ್ತಾರೆಂದು ಆರೋಪಿಸಿದ್ದಾರೆ.
ಇತ್ತೀಚಿಗೆ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಚಲೋ ರಾಜಭವನ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಪೋಲೀಸರ ನಡುವೆ ಲೆದಾಟವಾಗಿತ್ತು. ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.