ಬ್ರೇಕಿಂಗ್ ನ್ಯೂಸ್: ಖ್ಯಾತ ಹಿನ್ನಲೆ ಗಾಯಕ ಸೋಮದಾಸ್ ವಿಧಿವಶ

ಕೊಲ್ಲಂ: ಮಲಯಾಳಂ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ ಸೋಮದಾಸ್ ಅವರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಸೋಮದಾಸ್ ಅವರು ಕೊಲ್ಲಂನ ಪರಿಪಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ…

ಕೊಲ್ಲಂ: ಮಲಯಾಳಂ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ ಸೋಮದಾಸ್ ಅವರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸೋಮದಾಸ್ ಅವರು ಕೊಲ್ಲಂನ ಪರಿಪಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ಗಾಯಕ ಸೋಮದಾಸ್ ಅವರು ರಿಯಾಲಿಟಿ ಶೋಗಳ ಮೂಲಕ ಕೇರಳದಲ್ಲಿ ಮನೆಮಾತಾಗಿದ್ದರು. ಸೋಮದಾಸ್ ಅವರು, ಅಣ್ಣಾರ ಕಣ್ಣನ್ ತಮ್ಮಲಾಯತ್, ಮಿಸ್ಟರ್ ಪರ್ಫೆಕ್ಟ್, ಮನ್ನಂಕಟ್ಟಿ & ಕರಿಯಿಲಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಹಿನ್ನೆಲೆ ಗಾಯಕರಾಗಿ ಹಾಡಿದ್ದಾರೆ. ಅಷ್ಟೇ ಅಲ್ಲದೆ ಗಾಯಕ ಸೋಮದಾಸ್ ಅವರು ಮಲಯಾಳಂ ಬಿಗ್ ಬಾಸ್ ಸೀಸನ್ 2 ರ ರಿಯಾಲಿಟಿ ಶೋನಲ್ಲಿ ಸಹ ಭಾಗವಹಿಸಿದ್ದರು.

ಗಾಯಕ ಸೋಮದಾಸ್ ಅವರ ನಿಧನಕ್ಕೆ ಮಲಯಾಳಂ ಚಿತ್ರರಂಗ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.