ದಾವಣಗೆರೆ ಜ. 03 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 75% ಇತರೆ ಜನಾಂಗದ ವಿದ್ಯಾರ್ಥಿಗಳಿಗೆ 25% ಅವಕಾಶ ಇದ್ದು, ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಫೆ. 15 ರೊಳಗಾಗಿ ಈ ಕೆಳಕಂಡ ಕಛೇರಿಗಳಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, ದಾವಣಗೆರೆ-8861042302. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 9743320041. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ದಾವಣಗೆರೆ-9743320041.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ದಾವಣಗೆರೆ-9740064732. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ದಾವಣಗೆರೆ -8217781447. ತಾಲ್ಲೂಕು ವಿಸ್ತಾರಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಉಪ ವಿಭಾಗ ಮೊ: 7846062067 ಇಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ :08192-250022 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.




