ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ

ದಾವಣಗೆರೆ, ಫೆ.04 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪ್ರಥಮ ದರ್ಜೆ ಸಹಾಯಕ(ಎಫ್‍ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ(ಎಸ್‍ಡಿಎ) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಫೆ.08 ರಿಂದ 16…

Competitive Examination vijayaprabha

ದಾವಣಗೆರೆ, ಫೆ.04 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪ್ರಥಮ ದರ್ಜೆ ಸಹಾಯಕ(ಎಫ್‍ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ(ಎಸ್‍ಡಿಎ) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಫೆ.08 ರಿಂದ 16 ರವರೆಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಫೆ.08 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಪಿ.ಬಿ.ರಸ್ತೆ, ಕರೂರು ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾಡಳಿತ ಭವನ ಇಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್ ಇಲ್ಲಿ ತರಬೇತಿಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಕೆ.ಎನ್. ಗಿರೀಶ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.