ನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೌದು ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ…

Kiccha sudeepa vijayaprabha

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಹೌದು ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಮಾತನಾಡಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಹಾಗು 9ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಅವರನ್ನು ಆಹ್ವಾನಿಸಿದ್ದು, ಈ ಸಂದರ್ಭದಲ್ಲಿ ಅವರಿಗೆ “ವಾಲ್ಮೀಕಿ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ನಟ ಕಿಚ್ಚ ಸುದೀಪ್ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಭಾರತೀಯ ಸಿನಿರಂಗದಲ್ಲಿ 25 ವರ್ಷಗಳನ್ನು ಪೂರೈಸಿದ್ದು ತಮ್ಮದೇ ಆದ ಛಾಪು ಮೂಡಿಸಿ ಬೃಹತ್ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇತ್ತೀಚಿಗೆ ನಟ ಕಿಚ್ಚ ಸುದೀಪ್ ಅವರು ಸಿನಿಮಾ ರಂಗದಲ್ಲಿ 25 ವರ್ಷ ಪೂರೈಸಿದ್ದಕ್ಕೆ ದುಬೈ ನ ಬುರ್ಜ್ ಖಲೀಫಾ ದಲ್ಲಿ ಸುದೀಪ್ ಅವರ 2000 ಅಡಿ ಕಟೌಟ್ ಅನ್ನು ಬಿಂಬಿಸಿ, ಅವರ ಮುಂದಿನ ಸಿನಿಮಾ “ವಿಕ್ರಾಂತ್ ರೋಣ” ಟೀಜರ್ ಬಿಡುಗಡೆ ಮಾಡಲಾಗಿತ್ತು.

Vijayaprabha Mobile App free

ಇದನ್ನು ಓದಿ: ಖ್ಯಾತ ನಟಿ ತಾಪ್ಸೀ ಪನ್ನುಗೆ ಟಾಂಗ್ ನೀಡಿದ ಸಂಸದ ಪ್ರತಾಪ್ ಸಿಂಹ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.