ಆಂಗ್ಲರ ಬೌಲಿಂಗ್ ತತ್ತರಿಸಿದ ಭಾರತ; ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 227 ರನ್ ಗಳ ಹೀನಾಯ ಸೋಲು

ಚೆನ್ನೈ : ಚೆನ್ನೈ ನ ಎಂ. ಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 227 ರನ್‌ಗಳಿಂದ ಭಾರಿ ಸೋಲು ಕಂಡಿದೆ. ಇದರಿಂದ ಇಂಗ್ಲೆಂಡ್ ನಾಲ್ಕು ಪಂದ್ಯಗಳ…

england vs india 2021 first match vijayaprabha

ಚೆನ್ನೈ : ಚೆನ್ನೈ ನ ಎಂ. ಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 227 ರನ್‌ಗಳಿಂದ ಭಾರಿ ಸೋಲು ಕಂಡಿದೆ. ಇದರಿಂದ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಇಂಗ್ಲೆಂಡ್ ನೀಡಿದ ೪೨೦ ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ, ಎರಡನೇ ಇನ್ನಿಂಗ್ಸ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ (72) ಮತ್ತು ಓಪನರ್ ಶುಭಮಾನ್ ಗಿಲ್ (50) ಹೊರತುಪಡಿಸಿ ಉಳಿದವರು ಯಾರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಉಪನಾಯಕ ಅಜಿಂಕ್ಯ ರಹಾನೆ, ವಾಷಿಂಗ್ಟನ್ ಸುಂದರ್, ಶಹಬಾಜ್ ನದೀಮ್ ಡಕೌಟ್ ಆಗಿ ಪೆವಿಲಿಯನ್ ಗೆ ಮರಳಿದರು. ಮೊದಲ ಇನ್ನಿಂಗ್ಸ್‌ನಲ್ಲಿ 91 ರನ್ ಗಳಿಸಿದ್ದ ಪಂತ್ ಕೂಡ 11 ರನ್ ಗೆ ಔಟಾದರೇ, ಚೇತೇಶ್ವರ ಪೂಜಾರ 15 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.

ಈ ಹಿನ್ನೆಲೆಯಲ್ಲಿ ಸತತ ಓವರ್‌ಗಳಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಟೀಮ್ ಇಂಡಿಯಾ ಸೋಲಿನಿಂದ ಪಾರಾಗಲು ಸಾಧ್ಯವಾಗಲಿಲ್ಲ. ಇದರಿಂದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 192 ರನ್‌ಗಳಿಗೆ ಆಲೌಟ್‌ ಆಯಿತು. ಇಂಗ್ಲೆಂಡ್ ಪರ ಜ್ಯಾಕ್ ಲೀಚ್ 4, ಆಂಡರ್ಸನ್ 3 ವಿಕೆಟ್ , ಸ್ಟೋಕ್ಸ್, ಜೋಫ್ರಾ ಆರ್ಚರ್ ಮತ್ತು ಡೊಮ್ ಬೆಸ್ ತಲಾ ಒಂದು ವಿಕೆಟ್ ಪಡೆದರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Vijayaprabha Mobile App free

ಇನ್ನು ಇಂಗ್ಲೆಂಡ್ ಪರ ದ್ವಿಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕ ಜೋ ರೂಟ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.