ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವದು ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ ಸದಾನಂದಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು, ಕಾರ್ಮಿಕ ತನ್ನ ಕೆಲಸಕ್ಕೆ ಹೋಗಲು ಅನುಕೂಲಕ್ಕಾಗಿ ಬೈಕ್ ಕೊಂಡಿರಬಹುದು. ಇದು ಕಡಿಮೆ ದರ್ಜೆಯ ಬೈಕ್ ಸಹ ಆಗಿಬಹುದು. ಇಂದು ಟಿವಿ ಇಲ್ಲದ ಮನೆ ಇಲ್ಲ, ಎಲ್ಲರ ಮನೆಯಲ್ಲೂ ಟಿವಿ ಇದೆ. ಇದನ್ನೆಲ್ಲಾ ಪರಿಶೀಲಿಸಿ ವಿಸ್ತೃತ ಚರ್ಚೆ ಆಗಬೇಕು ಎಂದು ಸಲಹೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.