ಬೆಂಗಳೂರು: ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ, ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರೆಸುವುದಾಗಿ ಆಹಾರ ಮತ್ತು ನಾಗರೀಕ ಸಬರಾಜು ಸಚಿವ ಉಮೇಶ್ ಕತ್ತಿ ಅವರು ಸ್ಪಷ್ಟನೆ ನೀಡಿದ್ದಾರೆ.
ಆಹಾರ ಸಚಿವ ಉಮೇಶ್ ಕತ್ತಿ ಅವರು, ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ, ಇನ್ನು ಮುಂದೆಯೂ ಸಹ ಯಾವುದೇ ತಿದ್ದುಪಡಿ ಮಾಡುವುದಿಲ್ಲ, ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಈಗಿರುವ ಮಾನದಂಡಗಳನ್ನೇ ಮುಂದುವರೆಸುವುದಾಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಉಮೇಶ್ ಕತ್ತಿ ಅವರು 5 ಎಕರೆಗಿಂತ ಹೆಚ್ಚು ಜಾಮೀನು ಹೊಂದಿರುವ, ಮನೆಯಲ್ಲಿ ಟಿವಿ, ಫ್ರಿಡ್ಜ್, ಹಾಗು ಬೈಕ್ ಹೊಂದಿರುವರು ಇದ್ದರೆ ಕೂಡಲೇ ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಹೇಳಿಕೆ ನೀಡಿದ್ದರು. ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ವಿರುದ್ಧ ಮಾಜಿ ಆಹಾರ ಸಚಿವರಾದ ಯುಟಿ ಖಾದರ್ ಎಲ್ಲೆಡೆಯಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ಸ್ವಂತ ಪಕ್ಷವರೇ ಆದ ಶಾಸಕ ಸೋಮಶೇಖರ್ ರೆಡ್ಡಿ, ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವರಿಂದ ವಿರೋಧ ವ್ಯಕ್ತವಾದ ಹಿನ್ನಲೆ, ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.