ತಿರುವನಂತಪುರಂ: ಕೇರಳದ ರಾಜ್ಯ ಸರ್ಕಾರ ಸುಮಾರು 1500 ಕೋಟಿ ರೂಪಾಯಿ ವೆಚ್ಚದಲ್ಲಿ ಆಪ್ಟಿಕ್ ನೆಟ್ವರ್ಕ್ (KFON) 2021 ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್ ಅವರು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಇನ್ಮುಂದೆ ಉಚಿತ ಇಂಟರ್ನೆಟ್ ದೊರೆಯಲಿದ್ದು, 20 ಲಕ್ಷ ಕುಟುಂಬಗಳಿಗೆ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.
ಇನ್ನು KFON ಯೋಜನೆಯು ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿಯುಂಟು ಮಾಡಲಿದ್ದು, ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಎಲ್ಲಾ 14 ಜಿಲ್ಲೆಗಳ ಹಳ್ಳಿಗಳಿಗೂ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕ ಸೌಲಭ್ಯವನ್ನು ಸಂಪೂರ್ಣ ವಾಗಿ ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
ಇದಕೊಸ್ಕರ ಒಟ್ಟು 35,000 ಕಿ.ಮೀ ಉದ್ದದ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಹಾಕಲಾಗುತ್ತಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ಈ ಯೋಜನೆಯಲ್ಲಿ ಇ-ಅರೋಗ್ಯ ಕಾರ್ಯಕ್ರಮದಂತಹ ಸೇವೆಗಳು ಸೌಲಭ್ಯ ಪಡೆಯಲಿದ್ದು, ಐಟಿ ಉದ್ಯಮಗಳು, ವಿಮಾನ ನಿಲ್ದಾಣಗಳು ಸೌಲಭ್ಯ ಪಡೆಯಲಿವೆ.