ಅಹ್ಮದಾಬಾದ್ : ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಹಾಗು ಕೊನೆಯ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ & 25 ರನ್ ಗಳ ಭರ್ಜರಿ ಜಯ ದಾಖಲಿಸಿರುವ ಭಾರತ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ.
160 ಇನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಭಾರತ ಸ್ಪಿನ್ ದಾಳಿಗೆ ತತ್ತರಿಸಿದ ಆಂಗ್ಲರ ಪಡೆ 135 ರನ್ ಗಳಿಗೆ ಸರ್ವಪತನಗೊಂಡು ಇನ್ನಿಂಗ್ಸ್ & 25 ರನ್ ಗಳ ಹೀನಾಯ ಸೋಲು ಅನುಭವಿಸಿತು. ಇಂಗ್ಲೆಂಡ್ ಪರ ನಾಯಕ ಜೋ ರೂಟ್ (30), ಡ್ಯಾನಿಯಲ್ ಲಾರೆನ್ಸ್ (50), ಓಲಿ ಪೋಪ್ಸ್ (15) ರನ್ ಗಳಿಸಿದರು. ಇನ್ನು ಭಾರತ ಅಕ್ಷರ್ ಪಟೇಲ್(48ಕ್ಕೆ 5) & ಅಶ್ವಿನ್(47ಕ್ಕೆ 5) ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ವಹಿಸಿದರು.
ಇದಕ್ಕೂ ಮುನ್ನ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಪಂತ್(101) ಶತಕ, ಸುಂದರ್(96*), ರೋಹಿತ್ ಶರ್ಮ (49) ಹಾಗು ಅಕ್ಷರ್ ಪಟೇಲ್ (43) ಉತ್ತಮ ಬ್ಯಾಟಿಂಗ್ ನೆರವಿನಿಂದ 365 ರನ್ ಗಳಿಸಿತ್ತು.
ಭಾರತ ಪರ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ರಿಷಬ್ ಪಂತ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ಇನ್ನು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.