ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಇದಕ್ಕೆ ಕಾರಣ ನಿನ್ನೆಯಷ್ಟೇ ಅರ್ಜುನ್ ಸರ್ಜಾ ಅವರು ಚೆನ್ನೈನಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರನ್ನು ಭೇಟಿಯಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನುಂಟು ಮಾಡಿದೆ.
ಸಚಿವ ಕಿಶನ್ ರೆಡ್ಡಿ ಅವರಿಗೆ ತಮಿಳುನಾಡು ಚುನಾವಣೆ ಉಸ್ತುವಾರಿ ನೀಡಲಾಗಿದ್ದು, ಅರ್ಜುನ್ ಸರ್ಜಾ ಭೇಟಿ ಮಾಡಿ ರಾಜಕೀಯ ಕುರಿತು ಚರ್ಚಿಸಿದ್ದಾರೆ. ದಕ್ಷಿಣದಲ್ಲಿ ಬೇರೂರಲು ಶ್ರಮವಹಿಸುತ್ತಿರುವ ಬಿಜೆಪಿ ಖ್ಯಾತನಾಮರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದೆ.
ಇನ್ನು ಇತ್ತೀಚಿಗೆ ಖ್ಯಾತ ನಟಿ ಖುಷ್ಬೂ ಸುಂದರ್, ವಿಜಯಶಾಂತಿ ಸೇರಿದಂತೆ ಹಲವು ಖ್ಯಾತನಾಮರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈಗ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ರಾಜಕೀಯ ಭೇಟಿ ಬಿಜೆಪಿ ಮತ್ತಷ್ಟು ಬಲಬಂದಂತಾಗಿದೆ.