ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥೆ ದಾದಿ ಹೃದಯ ಮೋಹಿನಿ ವಿಧಿವಶ

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥೆ ದಾದಿ ಹೃದಯ ಮೋಹಿನಿ (93) ಅವರು ನಿನ್ನೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಕಳೆದ 15 ದಿನಗಳಿಂದ ಮುಂಬೈನ ಸೈಫೀ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥೆ ದಾದಿ ಹೃದಯ ಮೋಹಿನಿ (93) ಅವರು ನಿನ್ನೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದಾಗಿ ಕಳೆದ 15 ದಿನಗಳಿಂದ ಮುಂಬೈನ ಸೈಫೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹೃದಯ ಮೋಹಿನಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥೆಯಾಗಿದ್ದ ದಾದಿ ಜಾನಕಿ ಅವರ ನಿಧನದ ಬಳಿಕ ಅವರ ಹುದ್ದೆಗೆ ಹೃದಯ ಮೋಹಿನಿ ಅವರು ನೇಮಕಗೊಂಡಿದ್ದರು. ಮಾರ್ಚ್ 13ರಂದು ಹೃದಯ ಮೋಹಿನಿ ಅವರ ಅಂತ್ಯಸಂಸ್ಕಾರ ರಾಜಸ್ಥಾನದ ಅಬು ರೋಡ್‌ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.