ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಇಂದು ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ.
ಹೌದು, ಈ ಮೂರೂ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಮತದಾನ ನಡೆಯಲಿದ್ದು, ಮೇ ತಿಂಗಳ 2 ರಂದು ಫಲಿತಾಂಶ ಪ್ರಕಟವಾಗಲಿದ್ದು, ಈ ಬಗ್ಗೆ ಮಾರ್ಚ್ 23ರಂದು ಅಧಿಕೃತವಾಗಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಇನ್ನು ಈ ಮೂರು ಕ್ಷೇತ್ರಗಳ ಜೊತೆಗೆ ಸಿಂದಗಿ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕಾಗಿತ್ತು, ಆದರೆ ಚುನಾವಣಾ ಆಯೋಗವು ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಿಸಿಲ್ಲ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.