ನವದೆಹಲಿ: ಪಡಿತರ ಕಾರ್ಡುದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಗೆ ಸಂಬಂಧಿಸಿದ ಆ್ಯಪ್ ಅನ್ನು ಬಿಡುಗಡೆಗೊಳಿಸಿದೆ.
‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಗೆ ಸಂಬಂಧಿಸಿದಂತೆ, ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ.
ಸದ್ಯ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ‘ಮೇರಾ ರೇಷನ್’ ಮೊಬೈಲ್ ಅಪ್ಲಿಕೇಶನ್ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಲಭ್ಯವಿದ್ದು, ಶೀಘ್ರದಲ್ಲೇ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಸೇವೆ ಒದಗಿಸಲಿದೆ ಎನ್ನಲಾಗಿದೆ. ಈ ಆ್ಯಪ್ ಮೂಲಕ ಪಡಿತರಾದಾರರು ತಾವು ಎಲ್ಲಿದ್ದರೋ ಅಲ್ಲಿರುವ ಹತ್ತಿರದ ನ್ಯಾಯ ಬೆಲೆ ಅಂಗಡಿಗಳಿಂದ ಪಡಿತರ ಪಡೆದುಕೊಳ್ಳಬಹುದಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.