ಬೆಂಗಳೂರು: ದೇಶದಲ್ಲಿ ಕೋರೋನ ಹೆಚ್ಚಾಗುತ್ತಿರುವ ಹಿನ್ನಲೆ, ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನಡೆಸಿದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ
ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ನೈಟ್ ಕರ್ಫ್ಯೂ ಮಾಡುವ ಪ್ರಮೇಯ ಕೂಡ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜನತೆ ಭಯಪಡುವ ಅಗತ್ಯವಿಲ್ಲ. ನೆರೆಯ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದ್ದು, ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನೂ ಸ್ಥಾಪಿಸಲಾಗುವುದು ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.