ಬೆಂಗಳೂರು : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಭೂಮಿ ಮೇಲ್ಮೈಯಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಹಲವೆಡೆ ಇಂದಿನಿಂದ ಮಾರ್ಚ್ 21ರ ವರೆಗೆ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಕಲಬುರಗಿ, ಬೀದರ್ ಹಾಗೂ ಉತ್ತರ ಒಳನಾಡು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.