ತಿರುವನಂತಪುರಂ : ಮುಸ್ಲಿಂ ಮಹಿಳೆಯರು ನ್ಯಾಯಾಲಯದ ಮೊರೆ ಹೋಗದೆಯೇ ವಿವಾಹ ವಿಚ್ಛೇದನ ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹೌದು ನ್ಯಾಯಾಂಗ ಪ್ರಕ್ರಿಯೆಗೆ ಒಳಗಾಗದೇ ಮುಸ್ಲಿಂ ಮಹಿಳೆಯರು ವಿಚ್ಛೇದನ ಪಡೆಯುವುದನ್ನು ನಿಷೇಧಿಸಿ 1972ರಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠ ತೀರ್ಪು ನೀಡಿತ್ತು.
ಆದರೆ, ಈ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದ್ದು, ‘ವಿಚ್ಛೇದನ ಪಡೆಯುವುದಕ್ಕೆ ಸಂಬಂಧಿಸಿ ಮಹಿಳೆ ಮತ್ತು ಪುರುಷರು ಸಮಾನ ಹಕ್ಕು ಹೊಂದಿದ್ದಾರೆ ಎಂಬುದನ್ನು ಕುರಾನ್ ಮಾನ್ಯ ಮಾಡುತ್ತದೆ’ ಎಂದು ಕೇರಳ ಹೈಕೋರ್ಟ್ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.