ಬಳ್ಳಾರಿ,ಏ.20: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನಾಂಕವಾಗಿದ್ದು, ಇದನ್ನು ಏ.30ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು www.ssp.postmatric.karnataka.gov.in ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬೇಕು.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯನ್ನು www.bcwd.karnataka.gov.in ವೆಬ್‍ಸೈಟ್‍ನಲ್ಲಿ ನೋಡಬಹುದು.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in, ಇಲಾಖೆಯ ದೂ.ಸಂ.8050770005, 8050770004, ಇಮೇಲ್: bcwd.scholarship@karnataka.gov.in, ಹೆಚ್ಚಿನ ಮಾಹಿತಿಗಾಗಿ 080-35254757 ಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.