ಬೆಂಗಳೂರು: ಕರೋನ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ಗಂಡನ ನೆನೆದು, ನೋವು ತಾಳಲಾರದ ಗರ್ಭಿಣಿ ಪತ್ನಿ ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೌದು, ಬೆಂಗಳೂರಿನ ಕನಕಪುರದ ನಂದಿನಿ (28) ಉದ್ಯಮಿ ಸತೀಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇನ್ನೆರಡು ತಿಂಗಳಲ್ಲಿ ಪುಟ್ಟ ಕಂದಮ್ಮ ಭೂಮಿಗೆ ಬರುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ಸತೀಶ್ ತಾಯಿ ಕೊರೋನಾದಿಂದಾಗಿ ಮೃತಪಟ್ಟಿದ್ದರು. ಅವರನ್ನು ನೋಡಿಕೊಳ್ಳುತ್ತಿದ್ದ ಸತೀಶ್ ಕೂಡಾ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಇನ್ನು, ಗಂಡನ ಸಾವಿನ ನೋವು ತಾಳಲಾರದ ಗರ್ಭಿಣಿ ನಂದಿನಿ ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪುಟ್ಟ ಕಂದಮ್ಮ ಹೊಟ್ಟೆಯೊಳಗೆ ಪ್ರಾಣಬಿಟ್ಟಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.