ಬೆಂಗಳೂರು: ಆಶಾ ಕಾರ್ಯಕರ್ತೆಯರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು. ಅವರಿಗೆ ಸಕಾಲಕ್ಕೆ ಗೌರವಧನ ಪಾವತಿಸಬೇಕೆಂದು ಸರ್ಕಾರವನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಒತ್ತಾಯಿಸಿದ್ದಾರೆ.
ಈ ವೇಳೆ, ಹೆಚ್.ಡಿ.ಕುಮಾರಸ್ವಾಮಿ ಅವರು ದುಡಿದವರಿಗೆ ಗೌರವಧನ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಿರುವಾಗ ಸರ್ಕಾರ ಈಗಾಗಲೇ ಘೋಷಿಸಿರುವ 1,250 ಕೋಟಿ ರೂ. ಪ್ಯಾಕೇಜ್ ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊರೋನಾ ಕೈ ಮೀರುತ್ತದೆ: ಹೆಚ್ಡಿಕೆ
ಇನ್ನು ಕೊರೋನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆ ಕುಟುಂಬಕ್ಕೆ ಮಾತ್ರವೇ 50 ಲಕ್ಷ ರೂ. ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಆರೋಪಿಸಿದ್ದಾರೆ.
ಈವರೆಗೆ ಇನ್ನೂ 15 ಮಂದಿಗೆ ಪರಿಹಾರವನ್ನೇ ಕೊಟ್ಟಿಲ್ಲ ಎಂದು ಆರೋಪಿಸಿದ್ದು, ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19 ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ ಎಂದು ಕುಮಾರಸ್ವಾಮಿ ಅವರು ಎಚ್ಚರಿಸಿದ್ದಾರೆ.