ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ಯಾಸ್ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ರಾಜ್ಯದ ವಿವಿದೆಡೆ ಮಂಗಳವಾರ ಮಳೆಯಾಗಿದ್ದು, ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆಯಿದ್ದು, ಇಂದು ಕೂಡ ಮಳೆಯಾಗುವ ನಿರೀಕಹೆಯಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.