ಬೆಂಗಳೂರು: ರಾಜ್ಯದಲ್ಲಿ ಮೇ.31ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ.
ಇನ್ನು. ಬೀದರ್, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿಒಣಹವೆ ಮುಂದುವರೆಯಲಿದೆ.
ಇಂದಿನ ಹವಾಮಾನ ವರದಿ:
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು ಯಾದಗಿರಿಯಲ್ಲಿ ಜಿಲ್ಲೆಯಲ್ಲಿ ಸಹ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.