ಗದಗ: ರಾಜ್ಯದಲ್ಲಿ ಕರೋನ ಅಬ್ಬರ ಮುಂದುವರೆದಿದ್ದು ಜೂನ್ 14 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದು, ಕರೋನ ನಿಯಂತ್ರಿಸಲು ಲಸಿಕೆ ಕಾರ್ಯವನ್ನು ಚುರುಕುಗೊಳಿಸಿದ್ದು, ಜನರು ಮಾತ್ರ ಲಸಿಕೆ ಹಾಕಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ.
ಆದರೆ, ಲಸಿಕೆ ಕಾರ್ಯವನ್ನು ಚುರುಕುಗೊಳಿಸುವ ಉದ್ದೇಶದಿಂದ, ಯಾರು ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ಕೊಡಬಾರದೆಂಬ ರೂಲ್ಸ್ ವೊಂದನ್ನು ಜಾರಿಗೆ ತರಲು ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಲಸಿಕೆ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ಪತ್ರ ನೀಡಲಿದ್ದು, ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್ ನೊಂದಿಗೆ ಲಸಿಕೆ ಹಾಕಿಸಿಕೊಂಡ ಪತ್ರವನ್ನೂ ತಂದವರಿಗೆ ಮಾತ್ರವೇ ಪಡಿತರ ವಿತರಣೆ ಮಾಡಲಾಗುವುದು ಎಂದು ರೋಣ ತಾಲೂಕಿನ ಕೊತಬಾಳ ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.