ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಜೂನ್ 13ರವರೆಗೆ ಧಾರಾಕಾರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 3 ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದು, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನ ಹವಾಮಾನ ವರದಿ:
ಇನ್ನು ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಾವಣಗೆರೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.




