ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ನಿಧನರಾಗಿದ್ದಾರೆ.
ಹೌದು, ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಕರೆಂಟ್ ಕಂಬಕ್ಕೆ ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳು ನಿಷ್ಕ್ರಿಯಗೊಂಡಿದ್ದು, ಉಳಿಸಿಕೊಳ್ಳಲು ವೈದ್ಯರು ಸತತ ಪ್ರಯತ್ನ ನಡೆಸಿದರಾದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದರೆ.
ಅನೇಕ ಸಿನಿಮಾಗಳನ್ನು ನಿರ್ದೇಶಿಸಿ, ನಟಿಸಿದ ನಟ ಸಂಚಾರಿ ವಿಜಯ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.