ಹಾಟ್ ಬ್ಯುಟಿ ನಟಿ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು ಈ ಹಿಂದೆ ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲಾಗುವುದಾಗಿ ಹೇಳಿ ವಿವಾದವನ್ನು ಮೈ ಮೇಲೆ ಎಳೆದುಕೊಂಡು ಬೋಲ್ಡ್ ಹೇಳಿಕೆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದ ಪೂನಂ ಇದೀಗ ಮತ್ತದೆ ಹೇಳಿಕೆಯನ್ನು ರಿಪೀಟ್ ಮಾಡಿದ್ದಾರೆ.
ಟೀಂ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಜಯಗಳಿಸಿದರೆ ಮತ್ತೆ ಬೆತ್ತಲಾಗುತ್ತೇನೆ ಎಂದು ಹೇಳಬೇಕಾ? ಎಂದು ಪೂನಂ ಪಾಂಡೆ ಪ್ರಶ್ನೆ ಮಾಡಿದ್ದಾರೆ. ಇತ್ತೀಚಿಗೆ ಮದುವೆ ಆಗಿ ಕೆಲವೇ ದಿನಗಳಲ್ಲಿ ಪತಿ ಸ್ಯಾಮ್ ಬಾಂಬೆ ವಿರುದ್ಧ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದ ಪೂನಂ, ಪತಿ ವಿರುದ್ಧ ಹಲ್ಲೆ ಆರೋಪ ಮಾಡಿದ್ದರು. ಬಳಿಕ ಕೊಂಚ ಸೈಲೆಂಟ್ ಆಗಿದ್ದರು.
ಇದೀಗ ಆಂಗ್ಲ ವೆಬ್ ಪೋರ್ಟಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಟಿ ಪೂನಂ ಪಾಂಡೆ, “ಕ್ರಿಕೆಟ್ ಚಾಲು ಹೈ? ಲಾಗ್ ಕ್ರಿಕೆಟ್ ಖೇಲ್ ರಹೆ ಹೈ? ಒಂದು ವೇಳೆ ಇಂಡಿಯಾ ಗೆದ್ದರೆ ನಾನು ಖಂಡಿತ ಬಟ್ಟೆ ಬಿಚ್ಚುತ್ತೇನೆ ಎಂದು ಮತ್ತೆ ಹೇಳಬೇಕಾ? ಈ ಬಗ್ಗೆ ನಾನು ಈಗ ಯಾವುದೇ ಸುಳಿವು ನೀಡುವುದಿಲ್ಲ ಎಂದು ಹೇಳಿದ್ದು, ಸಾಧ್ಯವಾದರೆ ನಾನು ವಿವಾದ ಮಾಡುವ ಬಗ್ಗೆ ಯೋಚಿಸುತ್ತೇನೆ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.