ನಾಳೆಯಿಂದ ಈ ಜಿಲ್ಲೆ ಕೂಡ ಅನ್ ಲಾಕ್; ಸರ್ಕಾರ ದಿಢೀರ್ ಆದೇಶ

ಬೆಂಗಳೂರು: ಧಾರವಾಡ ಜಿಲ್ಲೆಯನ್ನು ಸಹ ಸೋಮವಾರದಿಂದ (ಜೂ.21) ಅನ್ ಲಾಕ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಜಗದೀಶ್…

ಬೆಂಗಳೂರು: ಧಾರವಾಡ ಜಿಲ್ಲೆಯನ್ನು ಸಹ ಸೋಮವಾರದಿಂದ (ಜೂ.21) ಅನ್ ಲಾಕ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ಅವರು, ನನ್ನ ಶಿಫಾರಸ್ಸಿನ‌ ಮೇರೆಗೆ ಮಾಹಿತಿಯನ್ನು ಮರುಪರಿಶೀಲಿಸಿ, ಅನ್ ಲಾಕ್ ಮಾಡಲು ಸರ್ಕಾರ ಆದೇಶಿಸಿದ್ದು, ನಾಳೆ ಮುಂಜಾನೆ 6ರಿಂದ ಒಂದನೇ ವರ್ಗದ ಜಿಲ್ಲೆಗಳ ಮಾರ್ಗಸೂಚಿ ಅನುಸಾರ ಧಾರವಾಡ ಜಿಲ್ಲೆಯೂ ಅನ್ ಲಾಕ್ ಆಗಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಜಗದೀಶ್ ಶೆಟ್ಟರ್ ಅವರು ಧಾರವಾಡ ಜಿಲ್ಲೆಯನ್ನು ಅನ್ ಲಾಕ್ ಕೋರಿ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.