ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಪೂರ್ವ ಅರಬ್ಬೀ ಸಮುದ್ರದಲ್ಲಿ ಒತ್ತಡ ಹೆಚ್ಚಳ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಭಾಗದಲ್ಲೂ ಜಿಲ್ಲೆಗಳಲ್ಲಿ ಸಹ ಇಂದಿನಿಂದ 22ರ ವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.