ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.
ಹೌದು, 31 ವರ್ಷಗಳ ಕಾಲ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದಿದ್ದ ಗೊರವಯ್ಯ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಇವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಗೊರವಯ್ಯ ಅವರು ಇಹಲೋಕ ತ್ಯಜಿಸಿದ್ದಾರೆ.
ಇನ್ನು, ಗೊರವಯ್ಯ ಮಾಲತೇಶಪ್ಪ ಅವರ ನಿಧನಕ್ಕೆ ಭಕ್ತಾದಿಗಳು ಕಂಬನಿ ಮಿಡಿದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.