ನವದೆಹಲಿ: ಮಾಜಿ ಕೇಂದ್ರ ಸಚಿವ ದಿ.ಪಿ.ಆರ್.ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ (67) ಅವರನ್ನು ನಿನ್ನೆ ರಾತ್ರಿ ದೆಹಲಿಯ ಮನೆಯಲ್ಲಿ ಹತ್ಯೆ ಮಾಡಲಾಗಿದೆ.
ದರೋಡೆ ಮಾಡುವ ಉದ್ದೇಶದಿಂದ ಮೃತ ಕಿಟ್ಟಿ ಕುಮಾರಮಂಗಲಂ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಸ್ತ್ರಿ ಮಾಡುವವನು ಮತ್ತು ಇಬ್ಬರು ಸಹಚರರು ಸೇರಿ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಮುಖ್ಯ ಆರೋಪಿ ರಾಜು ಲಖಾನ್ (24)ನನ್ನು ಬಂಧಿಸಿದ್ದು, ಇತರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



