ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ಇಲ್ಲ!

ಬೆಂಗಳೂರು: ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು,…

ಬೆಂಗಳೂರು: ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ.

ಹೌದು, ಕಳೆದ ವರ್ಷವೂ ಕರೋನ ಹಿನ್ನಲೆ ಲಾಕ್ ಡೌನ್, ಅನುದಾನದ ಕೊರತೆ ಕಾರಣದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯನ್ನು ಕೈಬಿಡಲಾಗಿತ್ತು. ಪ್ರತೀ ವರ್ಷ ಆಗಸ್ಟ್ ವೇಳೆಗೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ.

ಆದರೆ ಈ ಬಾರಿ ಕೂಡ ಕರೋನ ಎರಡನೇ ಅಲೆ ಹಿನ್ನಲೆ ಭೌತಿಕ ತರಗತಿ ಆರಂಭವಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದು, ಹೀಗಾಗಿ ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವುದಕ್ಕೆ ಬ್ರೇಕ್ ಬೀಳಲಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.