ಬೆಂಗಳೂರು: ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಂಗಳವಾರದವರೆಗೆ ಯೆಲ್ಲೊ ಅಲರ್ಟ್ ಜಾರಿ ಮಾಡಲಾಗಿದ್ದು, ರಾಯಚೂರು, ಕಲಬುರ್ಗಿ, ಹಾಸನ ಜಿಲ್ಲೆಯಲ್ಲಿ 32°C ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಮಡಿಕೇರಿಯಲ್ಲಿ 17°C ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕೊಡಗಿನಲ್ಲಿ ರೆಡ್, ಯಾದಗಿರಿಯಲ್ಲಿ ಯಲ್ಲೋ ಅಲರ್ಟ್:
ಕೊಡಗು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಇಲಾಖೆಯ ಮಾಹಿತಿ ಪ್ರಕಾರ, 200 ಮೀ.ಮೀ ಮಳೆಯಾಗಲಿದ್ದು ಬೆಟ್ಟ, ಗುಡ್ಡ ಹಾಗೂ ನದಿ ಪಾತ್ರದ ಜನ ಎಚ್ಚರದಿಂದ ಇರುವಂತೆ ಸೂಚಿಸಿದೆ.
ಇನ್ನು ಯಾದಗಿರಿ ಜಿಲ್ಲೆಯಲ್ಲಿ ನಾಳೆಯಿಂದ ಜುಲೈ 14ರವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಮತ್ತು ಜನ ನದಿ ತೀರ ಪ್ರದೇಶಗಳಿಗೆ ತೆರಳದಂತೆ ಡಿಸಿ ಡಾ.ಆರ್.ರಾಗಪ್ರಿಯ ಅವರು ಇಂದು ಖಡಕ್ ಸೂಚನೆ ನೀಡಿದ್ದಾರೆ.