ಬೆಂಗಳೂರು: ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಜುಲೈ 24ರವರೆಗೆ ರಾಜ್ಯದ ಕರಾವಳಿ ಹಾಗು ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಸದ್ಯಕ್ಕೆ ಇಂದು ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಮೈಸೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ, ಯಾದಗಿರಿ ಜಿಲ್ಲೆಗಳಲ್ಲೂ ಸಹ ವ್ಯಾಪಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.