ಹೊಸಪೇಟೆ: ಅಕ್ಟೊಬರ್ 2 ಗಾಂಧಿ ಜಯಂತಿಯಂದು ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸುವರು ಎಂದು ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ಹೌದು, ಶುಕ್ರವಾರ ಹೊಸಪೇಟೆಯಲ್ಲಿ ಮಾತನಾಡಿದ ಸಚಿವ ಆನಂದ್ ಸಿಂಗ್ ಅವರು, ಅಕ್ಟೊಬರ್ 2, 3ರಂದು ನಡೆಯುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಲಾಗುತ್ತದೆ. ಇನ್ನು, ಹೆಚ್ಚು ಎಲ್‌ಇಡಿ ಪರದೆ ಅಳವಡಿಸಿ, ಕಾರ್ಯಕ್ರಮದಲ್ಲಿ ಅಧಿಕ ಜನ ಸೇರದಂತೆ ನೋಡಲಾಗುವುದು ಎಂದು ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.