ದಾವಣಗೆರೆ, ಡಿ.28: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.
ಲಿಖಿತ ಪರೀಕ್ಷೆಗಳನ್ನು ಹಮ್ಮಿಕೊಂಡಿರುವ ವಿಸ್ತøತವಾದ ವೇಳಾಪಟ್ಟಿ ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರಾಢಶಾಲಾ ವೃಂದದ ಅರ್ಹ ಶಿಕ್ಷಕರು, ಇಲಾಖಾ ವೆಬ್‍ಸೈಟ್‍ನಲ್ಲಿ ಡಿ.31 ರಿಂದ ಜ.08 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಸಮಗ್ರ ಶಿಕ್ಷಣ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಜಿ.ಆರ್ ತಿಪ್ಪೇಶಪ್ಪ ತಿಳಿಸಿದ್ದಾರೆ.