ಒಮಿಕ್ರಾನ್‌ ಮತ್ತು ಕರೋನ ಮಹಾಸ್ಪೋಟ: ರಾಜ್ಯದಲ್ಲಿ ಇಂದು ಒಂದೇ ದಿನ 11,698 ಕರೋನ ಕೇಸ್‌

ಬೆಂಗಳೂರು: ರಾಜ್ಯಕ್ಕೆ ಕೊರೋನಾ ಭಾರೀ ಆಘಾತ ನೀಡಿದ್ದು, ಇಂದು ಒಂದೇ ದಿನ 11,698 ಹೊಸ ಕೇಸ್‌ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 9,221 ಕೇಸ್ ದೃಢಪಟ್ಟಿದ್ದು, ಪ್ರಸ್ತುತ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.7.77ರಷ್ಟಿದ್ದು, ಇಂದು ಸೋಂಕಿಗೆ ನಾಲ್ವರು…

coronavirus-update

ಬೆಂಗಳೂರು: ರಾಜ್ಯಕ್ಕೆ ಕೊರೋನಾ ಭಾರೀ ಆಘಾತ ನೀಡಿದ್ದು, ಇಂದು ಒಂದೇ ದಿನ 11,698 ಹೊಸ ಕೇಸ್‌ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 9,221 ಕೇಸ್ ದೃಢಪಟ್ಟಿದ್ದು, ಪ್ರಸ್ತುತ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.7.77ರಷ್ಟಿದ್ದು, ಇಂದು ಸೋಂಕಿಗೆ ನಾಲ್ವರು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಇಂದು 1,148 ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ 60,148 ಸಕ್ರಿಯ ಪ್ರಕರಣಗಳಿವೆ.

ಒಮಿಕ್ರಾನ್‌ ಸ್ಪೋಟ:

Vijayaprabha Mobile App free

ಇನ್ನು, ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ಒಮಿಕ್ರಾನ್‌ ಸಹ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 146 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಒಮಿಕ್ರಾನ್‌ ಸೋಂಕಿತರ ಸಂಖ್ಯೆ 479ಕ್ಕೆ ತಲುಪಿದ್ದು, ನಿನ್ನೆ ರಾಜ್ಯದಲ್ಲಿ 12,000 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.