ಬೆಂಗಳೂರು : ಠೇವಣಿ ಹಣ ಜಮೆಯಾದ 30 ದಿನದಲ್ಲೇ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಹೌದು,ಬೆಂಗಳೂರಿನಲ್ಲಿ ಮಾತನಾಡಿರುವ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಾಬು ಜಗಜೀವನ್ ರಾಮ್ ನಿಗಮ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಸಹಾಯಧನ ನೀಡುತ್ತವೆ. ಕೊಳವೆ ಬಾವಿ ಕೊರೆಸಿದವರು 50 ಸಾವಿರ ರೂ. ಠೇವಣಿ ಇಡಬೇಕು ಎಂದಿದ್ದಾರೆ.
ಇನ್ನು,ಠೇವಣಿ ಮಾಡಿದ 30 ದಿನಗಳಲ್ಲಿ ಫಲನುಭವಿಗಳ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.