ತುಮಕೂರು : ಇನ್ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂಥ ಕೊರೋನಾ ಸೋಂಕಿತರು ಸಾವನ್ನಪ್ಪಿದಲ್ಲಿ ಅಂಥವರ ಕುಟುಂಬಸ್ಥರಿಗೆ ಈ ಬಾರಿ ಸರ್ಕಾರದಿಂದ ಪರಿಹಾರ ಸಿಗಲ್ಲ ಎಂದು ಸಚಿವ ಜೆ.ಸಿಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ಹೌದು ತುಮಕೂರಿನಲ್ಲಿ ಮಾತನಾಡಿದ ಸಚಿವ ಜೆ.ಸಿಮಾಧುಸ್ವಾಮಿ, ಸದ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಮೂಲಸೌಕರ್ಯಗಳೂ ಲಭ್ಯವಿದ್ದು, ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವುದು ಉತ್ತಮ ಎಂದಿದ್ದಾರೆ.
ಈ ಹಿಂದೆ ಯಾವುದೇ ಆಸ್ಪತ್ರೆಯಲ್ಲಿ ಸೋಂಕಿತರು ಕೋವಿಡ್ ಗೆ ಬಲಿಯಾದರೆ 1 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.