ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇಂಧನ ಸಚಿವ ಸುನಿಲ್ ಕುಮಾರ್ ಅವರು ಬಿಗ್ ಶಾಕ್ ನೀಡಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿಕೆ ನೀಡಿದ್ದಾರೆ.
ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮಾರ್ ಅವರು, ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ನಾವು ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಬೇರೆ ಬೇರೆ ಇಲಾಖೆಗಳಿಂದ ಸುಮಾರು 12 ಸಾವಿರ ಕೋಟಿ ರೂ. ಬರಬೇಕಾಗಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿಯಿದೆ. ಹೀಗಾಗಿ ವಿದ್ಯುತ್ ದರ ಏರಿಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಕೆಇಆರ್ ಸಿ ಶಿಫಾರಸು ಮಾಡಿದರೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ ಎಂದು ಹೇಳಿರುವ ಸಚಿವರು, ಕೆಇಆರ್ ಸಿ ವರದಿ ಬಂದ ಬಳಿಕ ವಿದ್ಯುತ್ ದರ ಏರಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.