ಹೊಸಪೇಟೆ ನಗರಸಭೆ: ಅಧ್ಯಕ್ಷರಾಗಿ ಸುಂಕಮ್ಮ ಉಪಾಧ್ಯಕ್ಷರಾಗಿ ಆನಂದ ಆಯ್ಕೆ

ಹೊಸಪೇಟೆ(ವಿಜಯನಗರ ಜಿಲ್ಲೆ)ಜ.21: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಚುನಾವಣೆಯು ಶುಕ್ರವಾರ ಸಹಾಯಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳಾದ ಸಿದ್ಧರಾಮೇಶ್ವರ ಅವರ ನೇತೃತ್ವದಲ್ಲಿ ನಡೆಯಿತು. ಪರಿಶಿಷ್ಟ ಜಾತಿ ಮಹಿಳೆ 4ನೇ…

ಹೊಸಪೇಟೆ(ವಿಜಯನಗರ ಜಿಲ್ಲೆ)ಜ.21: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಚುನಾವಣೆಯು ಶುಕ್ರವಾರ ಸಹಾಯಕ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳಾದ ಸಿದ್ಧರಾಮೇಶ್ವರ ಅವರ ನೇತೃತ್ವದಲ್ಲಿ ನಡೆಯಿತು.

ಪರಿಶಿಷ್ಟ ಜಾತಿ ಮಹಿಳೆ 4ನೇ ವಾರ್ಡ್‍ನ ಸುಂಕಮ್ಮ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಾಮಾನ್ಯ ವರ್ಗದ 15ನೇ ವಾರ್ಡ್‍ನ ಎಲ್.ಎಸ್.ಆನಂದ್ ಅವರು 22 ಮತಗಳು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ಬಿ.ನಾರಾಯಣ ಅವರು 13 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಅಧ್ಯಕ್ಷರಾಗಿ ಸುಂಕಮ್ಮ ಮತ್ತು ಉಪಾಧ್ಯಕ್ಷರಾಗಿ ಎಲ್.ಎಸ್.ಆನಂದ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಸಿದ್ದರಾಮೇಶ್ವರ ಅವರು ಸಭೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

Vijayaprabha Mobile App free

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಹೆಚ್.ವಿಶ್ವನಾಥ್, ನಗರಸಭೆಯ ಆಯುಕ್ತರರಾದ ಮನ್ಸೂರುಅಲಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಹಾಗೂ ಲೋಕಸಭೆಯ ಸದಸ್ಯರಾದ ವೈ.ದೇವೆಂದ್ರಪ್ಪ ಅವರು ಇದ್ದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಂಕಮ್ಮ ಮತ್ತು ಎಲ್.ಎಸ್.ಆನಂದ ಅವರಿಗೆ ಚುನಾವಣಾಧಿಕಾರಿಗಳು ಹೂಗುಚ್ಛ ನೀಡಿ ಶುಭಕೋರಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.