ದಾವಣಗೆರೆಯಲ್ಲಿ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ 2022

ದಾವಣಗೆರೆ, ಜ.25: ಮಾನವನ ಮೂಲಭೂತ ಹಕ್ಕುಗಳಲ್ಲಿ ಮತದಾನದ ಹಕ್ಕು ವಿಭಿನ್ನವಾಗಿದೆ ಇದರಲ್ಲಿ ದೇಶದ ಚಿತ್ರಣವನ್ನೇ ಬದಲಾಯಿಸುವ ಶಕ್ತಿಯನ್ನು ನಾವು ಕಾಣಬಹುದು. ಭಾರತ ಸಂವಿಧಾನದ ಆಶಯದಂತೆ ನಮ್ಮ ದೇಶವು ಒಂದು ಅಖಂಡ ಸಾರ್ವಭೌಮತೆ, ಸಾಮಾಜಿಕ ನ್ಯಾಯ, ಪ್ರಜಾಸತಾತ್ಮಕ ಗಣರಾಜ್ಯ ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

ಮಂಗಳವಾರ ನಗರದ ಮಹಾನಗರಪಾಲಿಕೆಯ ಆವರಣದಲ್ಲಿ ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೇ|| ಗುಂಡಾಳ್ ಬ್ಯುಸಿನೆಸ್ ಸಲ್ಯೂಷನ್ಸ್ ದಾವಣಗೆರೆ ಮತ್ತು ಮಹಾನಗರ ಪಾಲಿಕೆ ದಾವಣಗೆರೆ ಇವರುಗಳ ಸಹಯೋಗದೊಂದಿಗೆ ಆಯೋಜಿಸಿದ್ದ ‘12ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆ ಪ್ರಜಾಪ್ರಭುತ್ವದ ಮುಖ್ಯ ಬುನಾದಿ ಆದರೆ ಬಹಳಷ್ಟು ದೇಶಗಳಲ್ಲಿ ಎಲ್ಲರಿಗೂ ಮತದಾನ ಮಾಡುವ ಹಕ್ಕು ಕೊಟ್ಟಿಲ್ಲ, ಭಾರತದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನ ಮಾಡುವ ವಿಶೇಷ ಹಕ್ಕು ನೀಡಲಾಗಿದೆ. ಆದರೆ, ತಾತ್ಸಾರ ಮನೋಭಾವದಿಂದ ಬಹುತೇಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುತ್ತಿಲ್ಲ ಮತ್ತು ಮತದಾನ ಮಾಡುವ ಆಸಕ್ತಿ ತೋರುತ್ತಿಲ್ಲ. ಇದರಿಂದ ಮತದಾನದ ಪ್ರಮಾಣ ಸಾಕಷ್ಟು ಕಡಿಮೆಯಾಗುತ್ತಿದೆ ಎಂದರು.

Advertisement

ವಿವಿಧ ವೈವಿದ್ಯ, ಕೋಟ್ಯಾಂತರ ಜನಸಂಖ್ಯೆ ಮತ್ತು ಭದ್ರತಾ ಸಮಸ್ಯೆ ಇರುವ ಈ ದೇಶದಲ್ಲಿ ಭಾರತ ಚುನಾವಣಾ ಆಯೋಗ ಯಶಸ್ವಿಯಾಗಿ ಮತದಾನ ನಡೆಸುತ್ತಿದೆ. ಬೇರೆ ಬೇರೆ ದೇಶಗಳಲ್ಲಿ 2 ರಿಂದ 4 ಪಕ್ಷಗಳನ್ನು ಕಾಣಬಹುದು. ಆದರೆ ನಮ್ಮ ದೇಶದಲ್ಲಿ ಬಹುಪಕ್ಷಿಯ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದು, 3 ಸಾವಿರಕ್ಕೂ ಹೆಚ್ಚು ಪಕ್ಷಗಳು ನೋಂದಣಿ ಆಗಿವೆ ಬೆಳಗಾವಿಯಲ್ಲಿ ನಡೆದ ಚುನಾವಣೆಯೊಂದರಲ್ಲಿ 456 ಅಭ್ಯರ್ಥಿಗಳು ಕಣದಲ್ಲಿದ್ದರೂ ಚುನಾವಣಾ ಆಯೋಗ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿತು ಎಂದು ತಿಳಿಸಿದರು.

ಚುನಾವಣಾ ಆಯೋಗವು ಇವಿಎಂ ವ್ಯವಸ್ಥೆ ಜಾರಿಗೆ ತಂದಾಗ ಯಾವುದೇ ಪಕ್ಷಕ್ಕೆ ಮತ ಚಲಾಯಿಸಿದರು ಒಂದೇ ಪಕ್ಷಕ್ಕೆ ಮತಗಳು ಬೀಳುತ್ತವೆ ಎಂಬ ಆರೋಪ ಸಹ ಕೇಳಿ ಬಂತು. ಈ ಆರೋಪವನ್ನು ಸುಳ್ಳು ಎಂದು ಖಾತರಿ ಪಡಿಸಲು ವಿವಿ ಪ್ಯಾಟ್ ಅಳವಡಿಸುವ ಮೂಲಕ ಪಾರದರ್ಶಕ ಚುನಾವಣೆ ಮಾಡಿದ ಕೀರ್ತಿ ಆಯೋಗಕ್ಕೆ ಸಿಕ್ಕಿತು ಎಂದು ಹೇಳಿದರು. ಈ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನ ಆಚರಿಸುವ ಮೂಲಕ ಮತದಾನದ ಮಹತ್ವ ತಿಳಿಸಲು ಮುಂದಾಗಿದೆ. ಅಲ್ಲದೇ ಇದರ ಜಾಗೃತಿಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ, ಭಿತ್ತಿಪತ್ರ ತಯಾರಿಸುವ ಸ್ಪರ್ಧೆಯನ್ನು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗಿತ್ತು ಎಂದು ಹೇಳಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ, ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿ, ಮತ ಹಾಕಲು ಅರ್ಹತೆ ಇರುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹೆಸರನ್ನು ಸೇರಿಸಬೇಕು, ಅದರಂತೆ ಜಾಗೃತ ಮತದಾರ ಅನರ್ಹ ಮತದಾರರನ್ನು ತೆಗೆದುಹಾಕಲು ಸಹಾಯ ಮಾಡಬೇಕು. ನಾವೆಲ್ಲರೂ ಕೂಡ ಜಾಗೃತ ಮತದಾರರಾಗಿ, ತಾವೆಲ್ಲರೂ ತಮ್ಮ ತಮ್ಮ ಮತಗಟ್ಟೆಗಳಲ್ಲಿ ತಾವೇ ಚುನಾವಣೆ ಆಯುಕ್ತರ ರಾಯಭಾರಿಯಾಗಿ ಕಾರ್ಯ ನಿರ್ವಹಿಸೋಣ, ಆರೋಗ್ಯಕರ ಮತದಾರರ ಪಟ್ಟಿಗಾಗಿ ಎಲ್ಲರೂ ಶ್ರಮಿಸೋಣ ಎಂದು ಮತದಾರರಿಗೆ ಹೇಳಿದರು.

ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಿಸಲು, ಮತದಾನದ ಜಾಗೃತಿ ಮೂಡಿಸಲು 1950ರ ಜನವರಿ 25ರಂದು ಚುನಾವಣಾ ಆಯೋಗ ಸ್ಥಾಪನೆಯಾಯಿತು. ಈ ಹಿನ್ನಲೆಯಲ್ಲಿ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುವ ಮೂಲಕ ಮತದಾರರ ಮಹತ್ವವನ್ನು ಮತದಾರರಿಗೆ ಸಾರಲಾಗುತ್ತಿದೆ. ಮತಗಟ್ಟೆ ಸುಧಾರಣೆ, ನೋಟಾ, ಸಖಿ ಮತಗಟ್ಟೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರವನ್ನು ನಿರ್ಧಾರ ಮಾಡುವ ನಿರ್ಣಯ ಪ್ರಜಾಪ್ರಭುತ್ವಕ್ಕೆ ಇರುತ್ತದೆ, ನಮ್ಮ ನಾಯಕನನ್ನು ನಾವೇ ಆಯ್ಕೆ ಮಾಡಬೇಕು ಪ್ರತಿಯೊಬ್ಬರ ಮತವು ಅತ್ಯಮೌಲ್ಯ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೊಸ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಿದರು. ಸಿದ್ದಗಂಗಾ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು, ಪಾಲಿಕೆ ಅಯುಕ್ತ ವಿಶ್ವನಾಥ ಪಿ. ಮುದಜ್ಜಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮೆ|| ಗುಂಡಾಳ್ ಬ್ಯುಸಿನೆಸ್ ಡೇಟಾ ಸೆಲ್ಯೂಷನ್ಸ್ ಮುಖ್ಯಸ್ಥ ಮಂಜುನಾಥ ಗುಂಡಾಳ್, ಪಾಲಿಕೆ ಉಪ ಆಯುಕ್ತ ಚಂದ್ರಪ್ಪ ಸಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ, ಡಿಡಿಪಿಐ ತಿಪ್ಪೇಶಪ್ಪ, ಡಿಡಿಪಿಯು ಶಿವರಾಜ್ ಮಹಾನಗರಪಾಲಿಕೆಯ ಸದಸ್ಯರು ಹಾಗೂ ಇತರರು ಹಾಜರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement