ಬೆಂಗಳೂರು: ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಹಲವೆಡೆ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಇಂದು ಭಾನುವಾರ ಆಗಿರುವುದರಿಂದ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಆದರೆ ಹಿಂದಿನಿಂದಲೂ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆ ದಿನದಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಬೆಂಗಳೂರಿನಲ್ಲಿ ಎಲ್ಲರೂ ಬಿಬಿಎಂಪಿ ಆದೇಶವನ್ನು ಪಾಲಿಸಬೇಕಿದೆ.
ಇನ್ನು, ಈ ಆದೇಶ ಮೀರಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕ್ರಮವನ್ನು ಬಿಬಿಎಂಪಿ ತೆಗೆದುಕೊಳ್ಳಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




