ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ ಜ.31: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ…

scholarship vijayaprabha

ದಾವಣಗೆರೆ ಜ.31: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ. 28 ರವರೆಗೆ ವಿಸ್ತರಿಸಲಾಗಿದೆ.

ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಜ.31ಕ್ಕೆ ನಿಗಧಿಪಡಿಸಲಾಗಿತ್ತು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೆÇೀಷಕರು ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ.28 ರವರೆಗೆ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in

ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ www.bcwd.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಹಾಗೂ ಇಮೇಲ್-8050770005/8050770004 bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in 080-35254757 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.