ವಿಜಯನಗರ ಫೆ.01: ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ (ಗುಂಪು) ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆ ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ನಗರಸಭೆಯ ಪೌರಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಯ ಹೆಸರು: ಸಮುದಾಯ ಸಂಪನ್ಮೂಲ ವ್ಯಕ್ತಿ, ಹುದ್ದೆ ಸಂಖ್ಯೆ-03, ಮಾಸಿಕ ಗೌರವಧನ : ರೂ.8ಸಾವಿರ, ಸಾರಿಗೆ ಭತ್ಯೆ ರೂ.2ಸಾವಿರ ಆಗಿದ್ದು, (ಅಗತ್ಯತ್ತೆಗೆ ತಕ್ಕಂತೆ ಗರಿಷ್ಠ,) ಕೊನೆಯ ದಿನಾಂಕ ಫೆ.16 ಆಗಿರುತ್ತದೆ.
ಅರ್ಹತೆಗಳು: ಕನಿಷ್ಟ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು , ಕನಿಷ್ಟ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯಯಾಗಿರಬೇಕು, ಆಂತರಿಕ ಸಾಲ ಪಡೆದು ಕಟಬಾಕಿದಾರರಾಗಿರಬಾರದು, ಸರ್ಕಾರಿ/ಅರೇ ಸಕಾರಿ/ಎನ್ .ಜಿ .ಓ/ ಗಳಲ್ಲಿ ಉದ್ಯೋಗಸ್ಥರಾಗಿರಬಾರದು, ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಛಾಶಕ್ತಿ ಹೊಂದಿರಬೇಕು, ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು, ವಯಸ್ಸು 18 ರಿಂದ 45 ವರ್ಷ ಆಗಿದೆ.
ಹೊಸಪೇಟೆ ನಗರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ, ಆಸಕ್ತ ಅರ್ಜಿದಾರರು ಕಛೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ಫೆ.16ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.