ಬೆಂಗಳೂರು: ರಾಜ್ಯದಲ್ಲಿ ನಿಗದಿಯಂತೆ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಜರುಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಕೊರೋನಾ ಸೋಂಕಿನ 3ನೇ ಅಲೆಯಿಂದ ದೇಶದ ವಿವಿಧ ರಾಜ್ಯಗಳು ಶಾಲೆಗಳನ್ನು ಬಂದ್ ಮಾಡಿದ್ದವು. ಆದರೆ, ಕರ್ನಾಟಕದಲ್ಲಿ 99% ಶಾಲಾ ಕಾಲೇಜುಗಳು ತೆರೆದಿದ್ದು, ಮಕ್ಕಳ ಹಾಜರಾತಿಯು ಉತ್ತಮವಾಗಿತ್ತು ಎಂದು ಹೇಳಿದ್ದಾರೆ.
ಇನ್ನು, ರಾಜ್ಯದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ SSLC ಪರೀಕ್ಷೆ ಮತ್ತು ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.