ಚಿತ್ರದುರ್ಗ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಮತ್ತೆ ಮೂವರು ಗಾಯಗೊಂಡಿದ್ದಾರೆ.
ಹೊಸದುರ್ಗ ಪಟ್ಟಣದ ಸಮೀಪ ಹಿರಿಯೂರು ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಕುಂದಾಪುರ ಮೂಲದ ಪುಟ್ಟ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಧೃತಿ (5), ಗೀತಾ (30) ಹಾಗೂ ಶಾರದಮ್ಮ (60) ಸ್ಥಳದಲ್ಲಿ ಯೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಸುಧೀಂದ್ರ, ದಯಾನಂದ, ನಾಗೇಶಯ್ಯ ಅವರನ್ನು ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕುಂದಾಪುರ ಮೂಲದ ಸುಧೀಂದ್ರ ಕುಟುಂಬ ಬೆಂಗಳೂರಿನಲ್ಲಿ ವಾಸವಿದ್ದು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಂದಾಪುರಕ್ಕೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.