ಶಿವಮೊಗ್ಗ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದೆ.
ಹೌದು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದು, ಸದ್ಯ ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಇನ್ನು, ಬಾಗಲಕೋಟೆಯ ರಬಕವಿ ಬನಹಟ್ಟಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.