BIG NEWS: ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 50,000 ಕೋಟಿ ಅನುದಾನಕ್ಕೆ ಮನವಿ

request for grant of Rs 50,000 crore to Devaraja Raju Development request for grant of Rs 50,000 crore to Devaraja Raju Development

ಬೆಂಗಳೂರು: 2022ರ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ರಾದ ಎಮ್.ಸಿ. ವೇಣುಗೋಪಾಲ್ ಅವರ ನೇತೃತ್ವದಲ್ಲಿ ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿಧಾನ ಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

2022ರ ಸಾಲಿನ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜ್ಯದ ಅತಿ ಹಿಂದುಳಿದ 197 ಜಾತಿಗಳನ್ನೊಳಗೊಂಡ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್, ಕಾರ್ಯದರ್ಶಿ ಎಮ್. ನಾಗರಾಜ್ ಹಾಗೂ ಖಜಾಂಚಿ ಎಲ್.ಎ. ಮಂಜುನಾಥ್, ಪದಾಧಿಕಾರಿಗಳಾದ ಎನ್. ಶಿವಂಶಕರ್, ನೆ.ಲ. ನರೇಂದ್ರ ಬಾಬು, ಪಿ.ಆರ್. ರಮೇಶ್, ಕಾರ್ಯದರ್ಶಿ ಚಂದ್ರ ಶೇಖರ್ ಪಿ. ರಾಜು, ರಾಜ್ಯ ಕ್ಷತ್ರಿಯ ಸಂಘದ ಅಧ್ಯಕ್ಷ ಎನ್. ಗಣೇಶ್ ರಾಜ್, ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ಆರ್. ರಾಧಾಕೃಷ್ಣ ಮೊದಲಾದವರು ಉಪಸ್ಥಿತಿರಿದ್ದರು.

Advertisement

ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಬಾರದು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಜಾರಿಗೊಳಿಸಿ, ಸುಭಾಷ್ ಅಡಿ ಸಮಿತಿಯನ್ನು ರದ್ದು ಪಡಿಸಬೇಕು. ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಸಲ್ಲಿಸಲಾಯ್ತು.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್.ಸಿ.ವೇಣುಗೋಪಾಲ್ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement