ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ವಲ್ಪ ಬದಲಾವಣೆ ಮಾಡಿದ್ದು, ಸದ್ಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಹೌದು, ರಾಜ್ಯದಲ್ಲಿ ಪಿಯು ಪರೀಕ್ಷೆ ಎಂದಿನಂತೆ ಏಪ್ರಿಲ್ 16ರಿಂದ ಮೇ 6ರವರೆಗೆ ನಡೆಯಲಿದ್ದು, ಏಪ್ರಿಲ್ 21ರಂದು ನಡೆಯಬೇಕಿದ್ದ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ಹಾಗಾಗಿ ಏಪ್ರಿಲ್ 21ರಂದು ನಡೆಯಬೇಕಿದ್ದ ಉರ್ದು ಪರೀಕ್ಷೆಯನ್ನು ಏಪ್ರಿಲ್ 21ರಂದು ಹಾಗು ಏಪ್ರಿಲ್ 29ರಂದು ಅರೇಬಿಕ್ ಪರೀಕ್ಷೆ ನಡೆಯಲಿದೆ. ಇನ್ನು, ಪರೀಕ್ಷೆ ವೇಳಾಪಟ್ಟಿಯ ಹೆಚ್ವಿನ ಮಾಹಿತಿಗೆ https://pue.kar.nic.in ನೋಡಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.